ನವದೆಹಲಿ: ದಿನ ಬಳಕೆ ವಸ್ತು, ಸಾಮಗ್ರಿಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಇದರಿಂದ ಕಂಗಾಲಾಗಿರುವ ಶ್ರೀಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ ತಟ್ಟಿದೆ. ಗೃಹ ಬಳಕೆಯ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬಂದಿದೆ.
ದೆಹಲಿಯಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್ ದರ 1,053 ರೂ. ಆಗಿದೆ. 5 ಕೆಜಿಯ ಗೃಹ ಬಳಕೆ ಸಿಲಿಂಡರ್ ಬೆಲೆ ಸಹ ಹೆಚ್ಚಿಸಲಾಗಿದ್ದು, ಪ್ರತಿ ಸಿಲಿಂಡರ್‌ಗೆ 18 ರೂ. ಏರಿಕೆ ಮಾಡಲಾಗಿದೆ. 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ. ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ 1,005.50 ರೂ.ಗೆ ಲಭ್ಯವಾಗುತ್ತಿದೆ.
ಈ ಹಿಂದೆ ಮೇ 19 ರಂದು ಗೃಹ, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್‌ಗೆ 3.5 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.
PublicNext
06/07/2022 09:52 am