ಮುಂಬೈ: ಸ್ಪೈಸ್‌ಜೆಟ್ ವಿಮಾನ ಯಾನ ಸಂಸ್ಥೆಯು ತನ್ನ 80 ಪೈಲೆಟ್‌ಗಳಿಗೆ ಮೂರು ತಿಂಗಳುಗಳ ಕಾಲ ಸುಧೀರ್ಘ ರಜೆ ನೀಡಿದೆ. ಸಂಸ್ಥೆಯಲ್ಲಿ ಹೆಚ್ಚಿನ ಪೈಲೆಟ್‌ಗಳು ಇದ್ದು ನಿರ್ವಹಣಾ ವೆಚ್ಚ ಸರಿದೂಗಿಸಲು ಸಂಸ್ಥೆ ಈ ಕ್ರಮ ಕೈಗೊಂಡಿದೆ.
ಗುರುಗ್ರಾಮದಲ್ಲಿರುವ ವಿಮಾನಯಾನ ಸಂಸ್ಥೆಯ ಪ್ರಧಾನ ಕಚೇರಿ ಈ ಮಾಹಿತಿ ನೀಡಿದೆ. ಬೋಯಿಂಗ್-737 ವಿಭಾಗದ 40 ಪೈಲಟ್‌ಗಳು ಹಾಗೂ ಕ್ಯೂ-400 ವಿಭಾಗದ 40 ಪೈಲಟ್‌ಗಳು ಸೇರಿ ಒಟ್ಟು 80 ಪೈಲಟ್‌ಗಳನ್ನು ಧೀರ್ಘ ರಜೆ ಮೇಲೆ ಮನೆಗೆ ತೆರಳುವಂತೆ ಸೂಚಿಸಿದೆ. ಡಿಸೆಂಬರ್‌ನಲ್ಲಿ 7 ಹೊಸ ಬೋಯಿಂಗ್ 737 ಮ್ಯಾಕ್ಸ್ ಅನ್ನು ಸೇರಿಸಲು ಏರ್‌ಲೈನ್ ಮುಂದಾಗಿದ್ದು, ಹೊಸ ಮಾರ್ಗದ ಹಾರಾಟ ಶುರು ಮಾಡಿದರೆ ಈ ಪೈಲಟ್‌ಗಳನ್ನು ವಾಪಸ್ ಕರೆಸಿಕೊಳ್ಳಲಾಗುವುದು ಎಂದು ಸಂಸ್ಥೆ ತಿಳಿಸಿದೆ.
PublicNext
21/09/2022 08:39 am