ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 29 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷೀಣಿಸುತ್ತಿದೆ. ಇಂದು 29 ಜನರಲ್ಲಿ ಸೋಂಕು ಪತ್ತೆಯಾಗಿದೆ.ರಾಜ್ಯದಲ್ಲಿ ಈವರೆಗೂ 3945727 ಜನರಿಗೆ ಸೋಂಕು ತಗುಲಿದ್ದು 40055 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 61 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3904162 ಕ್ಕೆ ಏರಿಕೆಯಾಗಿದೆ.

ಇನ್ನು 1468 ಸಕ್ರಿಯ ಪ್ರಕರಣಗಳಿದ್ದು, ಕೊರೊನಾ ಪಾಸಿಟಿವಿಟಿ ಪ್ರಮಾಣ 0.23% ನಷ್ಟಿದೆ. ಇದೇ ವೇಳೆ 12376 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.ಕೊರೊನಾದಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ.

Edited By : Nirmala Aralikatti
PublicNext

PublicNext

05/04/2022 09:17 pm

Cinque Terre

26.92 K

Cinque Terre

0