ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಸಿಸಿಬಿ ಪೊಲೀಸರ ಕಾರ್ಯಾಚರಣೆ: 10 ಕುಖ್ಯಾತ ಕಳ್ಳರ ಬಂಧನ , 1 ಕೆ.ಜಿ ಆಭರಣ ವಶ

ಚಾಮರಾಜನಗರ : ಸಿಸಿಬಿ ಪೊಲೀಸರು 10 ಮಂದಿ ಕುಖ್ಯಾತ ಕಳ್ಳರನ್ನು ಬಂಧಿಸಿ, 25 ಚಿನ್ನದ ಸರಗಳು ಸೇರಿದಂತೆ ₹50 ಲಕ್ಷ ಮೌಲ್ಯದ ಒಂದು ಕೆ.ಜಿ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ, ಜಿಲ್ಲೆ ಹಾಗೂ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ವರದಿಯಾದ ಒಟ್ಟು 25 ಸರಗಳವು, ಒಂದು ಮನೆಯಲ್ಲಿ ಕಳವು ಹಾಗೂ 2 ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ.

ಕಳವಾಗಿದ್ದ 2 ಹಾಗೂ ಕೃತ್ಯಕ್ಕೆ ಬಳಸಿದ್ದ 7 ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಲಾಗಿದೆ. ಇವೆಲ್ಲವೂ 3ರಿಂದ 4 ತಿಂಗಳುಗಳ ವ್ಯಾಪ್ತಿಯಲ್ಲಿ ನಡೆದಿರುವ ಪ್ರಕರಣಗಳಾಗಿವೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, 'ನಗರದಲ್ಲಿ ಸರಗಳವು ಪ್ರಕರಣಗಳು ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ಪತ್ತೆ ಹಚ್ಚಿದೆ. ಬಂಧಿತರಲ್ಲಿ ಎರಡು ಕುಖ್ಯಾತ ಸರಗಳ್ಳರ ತಂಡಗಳಿವೆ ಮತ್ತು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ಇದ್ದಾರೆ' ಎಂದು ತಿಳಿಸಿದರು.

Edited By : Nagesh Gaonkar
PublicNext

PublicNext

30/09/2022 05:48 pm

Cinque Terre

18.17 K

Cinque Terre

0