", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/39640520250118042352filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಯುವಜನತೆ ಮಾನಸಿಕ ಮತ್ತು ದೈಹಿಕವಾಗಿ ಸಧೃಡವಾದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ...Read more" } ", "keywords": "Node,Chamarajnagar,Law-and-Order", "url": "https://publicnext.com/article/nid/Chamarajnagar/Law-and-Order" }
ಚಾಮರಾಜನಗರ : ಯುವಜನತೆ ಮಾನಸಿಕ ಮತ್ತು ದೈಹಿಕವಾಗಿ ಸಧೃಡವಾದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯದೀಶ ಬಸವರಾಜ ತಳವಾರ ಸಲಹೆ ನೀಡಿದರು.
ಗುಂಡ್ಲುಪೇಟೆ ಪಟ್ಟಣದ ನ್ಯಾಯಲಯದ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ತಾಲೂಕು ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರು 39 ವರ್ಷ ಜೀವಿಸಿದರೂ ಅವರ ಸಾಧನೆ ಮಾತ್ರ ಅಪಾರ. ಅವರು ತಮ್ಮ ಜೀವಿತ ಅವಧಿಯನ್ನು ಯುವ ಜನತೆಗಾಗಿ ಮುಡಿಪಾಗಿಟ್ಟಿದ್ದರು. ಯುವಜನತೆ ಮನಸ್ಸು ಮಾಡಿದೆ ಅಸಾಧ್ಯವಾದದ್ದನ್ನು ಸಾಧಿಸಬಹುದು ಎಂದು ಹೇಳಿದರು.
ಯಾವುದೇ ಕೆಲಸ ಮಾಡಬೇಕಾದರೆ ಆತ್ಮಸ್ಥೈರ್ಯ, ವಿಶ್ವಾಸ ಹಾಗೂ ಇಚ್ಛಾಶಕ್ತಿಯಿಂದ ಮಾಡಿದಾಗ ಮಾತ್ರ ಆ ಕೆಲಸ ಯಶಸ್ವಿಯಾಗಲು ಸಾಧ್ಯ ಎಂಬುದು ಸ್ವಾಮಿ ವಿವೇಕಾನಂದರ ಆಶಯವಾಗಿತ್ತು. ಆದರೆ ಇಂದಿನ ಯುವ ಪೀಳಿಗೆ ಚಲನಚಿತ್ರ ನಟರನ್ನು ತಮ್ಮ ಹೀರೋಗಳನ್ನಾಗಿ ಅನುಕರಣೆ ಮಾಡುತ್ತಿರುವುದು ವಿಷಾದಕರ ಸಂಗತಿಯಾಗಿದೆ ಎಂದರು.
ಯುವಜನತೆ ದೇಶದ ಆಸ್ತಿ. ಯುವಕರು ದೇಶ ಕಟ್ಟುವ ಕೆಲಸ ಮಾಡಬೇಕು ಎಂಬುದು ನಮ್ಮ ಹಿಂದಿನ ತಲೆಮಾರಿನವರ ಆಶಯ. ಯುವಜನರಿಂದ ಮಾತ್ರ ಪರಿವರ್ತನೆ ಸಾಧ್ಯ. ದೇಶದ ಸುಭದ್ರ ಭವಿಷ್ಯಕ್ಕೆ ಇಂದಿನ ಯುವಜನರು ವಿವೇಕಾನಂದರ ತತ್ವ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಧೀಶ ಜಿ.ಜೆ.ಶಿವಕುಮಾರ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್, ಕಾರ್ಯದರ್ಶಿ ಬೀರೇಗೌಡ ಇದ್ದರು.
Kshetra Samachara
18/01/2025 04:21 pm