ಚಾಮರಾಜನಗರ : ವಿಜಯನಗರದ ಜಿಲ್ಲಾಧಿಕಾರಿ ಗದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಮೂಡ್ನಾಕೂಡು ಪ್ರಕಾಶ್ ಒತ್ತಾಯಿಸಿದರು.
ವಿಜಯನಗರದಲ್ಲಿ ನಡೆಯುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸ್ವಾಮೀಜಿ ಪಕ್ಕದಲ್ಲಿ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ. ನೀನ್ಯಾರು? ಸ್ವಾಮೀಜಿ ಪಕ್ಕದಲ್ಲೇ ಕುಳಿತಿದ್ದೀಯಾ ಎಂದು ಗದರಿ ಎದ್ದು ಕಳುಹಿಸುವ ಮೂಲಕ ಐಎಎಸ್ ಹುದ್ದೆಗೆ ಅಪಮಾನ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ. ಕೂಡಲೇ ಮುಖ್ಯಮಂತ್ರಿ ಅವರು ರಾಜ್ಯದ ಜನತೆಯಲ್ಲಿ ಕ್ಷಮೆಯಾಗಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಿದ್ದರಾಮಯ್ಯ ಅವರು ಸಮಾಜವಾದಿ ಹಿನ್ನಲೆಯಲ್ಲಿ ಬಂದವರು ಎಂದು ಪ್ರಗತಿಪರರು ದೊಡ್ಡ ಬಿರುದು ಕೊಟ್ಟಿದ್ದಾರೆ. ಸಮಾಜವಾದಿ, ಸಂವಿಧಾನವಾದಿ, ಸಾಮಾಜಿಕ ನ್ಯಾಯದ ಹರಿಕಾರ ಎಂಬ ಬಿರುದು ತೆಗೆದುಕೊಂಡಿದ್ದಾರೆ. ಸಂವಿಧಾನದಡಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿರುವ ಸಿದ್ದರಾಮಯ್ಯನವರೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಬ್ಬ ಐಎಎಸ್ ಅಧಿಕಾರಿಯನ್ನು ಅವಮಾನ ಮಾಡಿದ್ದೀರಿ. ಇದು ಅತ್ಯಂತ ಖಂಡನೀಯ ಎಂದರು.
PublicNext
17/01/2025 03:40 pm