", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1735988277_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಶೇ.15ರಷ್ಟು ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರ...Read more" } ", "keywords": "Node,Chamarajnagar,Public-News", "url": "https://publicnext.com/article/nid/Chamarajnagar/Public-News" }
ಚಾಮರಾಜನಗರ : ಶೇ.15ರಷ್ಟು ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವ ರಾಜ್ಯ ಸರ್ಕಾರ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಶನಿವಾರ ನಗರದಲ್ಲಿ ತಮಟೆ ಚಳವಳಿ ನಡೆಸಿದರು.
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ, ನಿಗಮದ ಸಚಿವರ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವು ಬಸ್ ದರವನ್ನು ಶೇ.15ರಷ್ಟು ಹೆಚ್ಚಿಸಿರುವುದರಿಂದ ಸಾರ್ವಜನಿಕರಿಗೆ ತೀವ್ರ ಹೊರೆಯಾಗಿದೆ. ಈಗಾಗಲೆ ಎಲ್ಲ ರೀತಿಯ ದಿನಸಿ ಪದಾರ್ಥಗಳು, ಎಣ್ಣೆ, ಕಾಳುಗಳು, ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಅಲ್ಲದೆ ಡೀಸೆಲ್, ಪೆಟ್ರೋಲ್, ನೋಂದಣಿ ಶುಲ್ಕ ಮತ್ತು ಮುದ್ರಾಂಕ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈ ಸಂಕಷ್ಟದಿಂದ ಜನರು ಸುಧಾರಿಸಿಕೊಳ್ಳುವ ಮೊದಲೇ ಬಸ್ ಪ್ರಯಾಣದರವನ್ನು ಏರಿಕೆ ಮಾಡಿ, ಸರ್ಕಾರ ಗಾಯದ ಮೇಲೆ ಬರೆ ಎರಳೆದಿದೆ. ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರಿಗೆ ಬಾರಿ ಹೊರೆಯಾಗಲಿದೆ.
ಹೀಗಾಗಿ ಸರ್ಕಾರ ಕೂಡಲೇ ಬಸ್ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶ್ರೀನಿವಾಸಗೌಡ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದ, ಲಿಂಗರಾಜು, ರವಿಚಂದ್ರ ಪ್ರಸಾದ್, ರಾಚಪ್ಪ, ತಾಂಡವಮೂರ್ತಿ, ವೀರಭದ್ರ ಸೇರಿದಂತೆ ಇತರರು ಇದ್ದರು.
Kshetra Samachara
04/01/2025 04:27 pm