ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಪ್ರಯಾಣ ದರ ಏರಿಕೆ ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ

ಚಾಮರಾಜನಗರ : ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿಜಮಾಯಿಸಿದ ಎಸ್‌ಡಿಪಿಐ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಬಸ್ ಪ್ರಯಾಣ ದರ ಏರಿಕೆ ಸಂಬಂಧ ಪೋಸ್ಟರ್‌ಗಳನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಪ್ರಯಾಣಿಕರಿಗೆ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಿದರು. ಬಳಿಕ ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಸೈಯದ್ ಆರೀಫ್ ಮಾತನಾಡಿ. ರಾಜ್ಯ ಸರ್ಕಾರ ಸಾರಿಗೆ ಬಸ್ ಪ್ರಯಾಣದರವನ್ನು ಏರಿಕೆ ಮಾಡಿರುವುದು ಖಂಡನೀಯ. ಬಸ್ ದರ ಏರಿಕೆಯಿಂದಾಗಿ ಜನಸಾಮಾನ್ಯರು, ಕಾರ್ಮಿಕ ವರ್ಗ, ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ ಎಂದರು.

ಈಗಾಗಲೇ ಜನರು ಅಗತ್ಯ ವಸ್ತುಗಳು ಸೇರಿದಂತೆ ಪೆಟ್ರೋಲ್, ಡೀಸೆಲ್ ದರಗಳ ಏರಿಕೆಯಿಂದ ಸಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಈಗ ಏಕಾಏಕಿ ಬಸ್ ಪ್ರಯಾಣ ದರ ಏರಿಕೆ ಮಾಡಿ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ ಪ್ರಯಾಣ ದರ ಏರಿಕೆಯಿಂದ "ಶಕ್ತಿ" ಯೋಜನೆಯ ಫಲಾನುಭವಿ ಮಹಿಳೆಯರಿಗೆ ಉಚಿತ ಬಸ್ ಯೋಜನೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದೆ. ಇದೊಂದು ಪೊಳ್ಳು ವಾದ. ಏಕೆಂದರೆ ಹೆಚ್ಚಿನ ಬಸ್ ಪ್ರಯಾಣಿಕರು ಪುರುಷರೇ ಆಗಿದ್ದಾರೆ. ಅವರು ಈ ಹೆಚ್ಚಳದ ಭಾರವನ್ನು ಹೊರಬೇಕಾಗಿದೆ. ಇದು ಪ್ರತಿ ಕುಟುಂಬಕ್ಕೂ ಹೊರೆ ಆಗಲಿದೆ ಎಂದರು. 

ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಜನರ ಮೇಲೆ ಅನಗತ್ಯ ಹೊರೆಯನ್ನು ಹಾಕದೆ ಸಾರಿಗೆ ಕ್ಷೇತ್ರದ ಆರ್ಥಿಕ ಕೊರತೆಯನ್ನು ನಿರ್ವಹಿಸಲು ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕೇ ಹೊರತು ಪ್ರಯಾಣ ದರ ಏರಿಕೆ ಮಾಡಿ ಜನ.ಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡಬಾರದು. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಕೆಲಸವನ್ನು ಸರ್ಕಾರದ ಇತರೆ ಆದಾಯಗಳ ಮೂಲದಿಂದ ಭರಿಸಿಕೊಳ್ಳುವ ಕೆಲಸ ಮಾಡಲಿ ಎಂದು ಸೂಚಿಸಿದರು.

Edited By : PublicNext Desk
PublicNext

PublicNext

04/01/2025 05:47 pm

Cinque Terre

24.66 K

Cinque Terre

0

ಸಂಬಂಧಿತ ಸುದ್ದಿ