", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/39640520250107054933filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡ...Read more" } ", "keywords": "Node,Chamarajnagar,Public-News", "url": "https://publicnext.com/article/nid/Chamarajnagar/Public-News" }
ಚಾಮರಾಜನಗರ : ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡುವ ಮೂಲಕ ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು, ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿ ಪುರುಷ ಪ್ರಯಾಣಿಕರ ದರ ಹೆಚ್ಚಳ ಮಾಡಿ ಪುರುಷರ ಕಿವಿಗೆ ಹೂ ಇಡುವ ಕೆಲಸ ಮಾಡಿದೆ ಎಂದು ಘೋಷಣೆ ಕೂಗಿ ಪರುಷ ಪ್ರಯಾಣಿಕರಿಗೆ ಗುಲಾಬಿ ನೀಡಿ, ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಬಡವರು, ಮಧ್ಯವರ್ಗದ ಜನರ ಪಾಲಿಗೆ ಸತ್ತು ಹೋಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳ ಹತ್ತಿರವಾಗುತ್ತಿದೆ. ಸರ್ಕಾರದಿಂದ ಯಾವ ಅಭಿವೃದ್ಧಿ ಕಾರ್ಯಕ್ರಮಗಳು ಇಲ್ಲ. ಕಾಂಗ್ರೆಸ್ ಬಡವರ ವೋಟನ್ನು ಖರೀದಿ ಮಾಡಿಕೊಳ್ಳಲು ಐದು ಗ್ಯಾರಂಟಿ ಯಜನೆಗಳನ್ನು ಜಾರಿಗೊಳಿಸಿತು. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಬಳಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ನಡೆಸುತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಎಸ್ಸಿ, ಎಸ್ಟಿಗಳ ಟಿಎಸ್ಪಿ, ಎಸ್ಸಿಪಿ ಯೋಜನೆಗಳ ಹಣ, ಅಂಗವಿಕಲರ ಅಭಿವೃದ್ದಿಗಾಗಿ ಇರುವ ಸುಮಾರು 30 ಸಾವಿರ ಕೋಟಿ ರೂ.ಹಣವನ್ನು ದುರುಪಯೋಗ ಮಾಡಿಕೊಂಡು, ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುತ್ತಿದ್ದಾರೆ. ಗ್ಯಾರಂಟಿ. ಯೋಜನೆಗಳು ಕೂಡ ಕುಂಟುತ ಸಾಗುತ್ತಿದೆ. ಈ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗದೆ ಸಾರ್ವಜನಿಕರಿಂದ ಲೂಟಿ ಮಾಡಲು ಶುರು ಮಾಡಿದೆ. ಈ ಐದು ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ 6 ತಿಂಗಳಲ್ಲೇ ಸಂಪನ್ಮೂಲ ಸಂಗ್ರಹ ಮಾಡಲು ಕಾಂಗ್ರೆಸ್ ಬಳಸಿಕೊಂಡ ಅತ್ಯಂತ ಕೆಟ್ಟ ಮಾರ್ಗ ಎಂದರೆ ಬೆಲೆ ಹೆಚ್ಚಳ ನೀತಿ. ಅದರಲ್ಲೂ ಅಬಕಾರಿ ಬೆಲೆ ಏರಿಕೆ ಮಾಡಿ ಬಡವರನ್ನು ಮತ್ತುಷ್ಟು ಕಷ್ಟಕ್ಕೆ ತಳ್ಳುತ್ತಿದ್ದಾರೆ. ಇದರಿಂದಲೇ ಸರ್ಕಾರಕ್ಕೆ ಶೇ.90ರಷ್ಟು ಆದಾಯ ಬರುತ್ತಿದೆ ಎಂದರು.
Kshetra Samachara
07/01/2025 05:47 pm