", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1738665036_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಸಾರ್ವಜನಿಕ ಸ್ಥಳಗಳನ್ನು ನಿಷ್ಕಲ್ಮಷ ಮನಸ್ಸಿನಿಂದ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಸರ್ಕಾರ ಸೂಕ್ತ ಭದ್ರತೆ ಮತ್ತು ಸೌಲಭ್ಯಗಳನ್ನ...Read more" } ", "keywords": "Node,Chamarajnagar,Public-News", "url": "https://publicnext.com/article/nid/Chamarajnagar/Public-News" } ಚಾಮರಾಜನಗರ : ಸರ್ಕಾರ ಪೌರಕಾರ್ಮಿಕರಿಗೆ ಸೂಕ್ತ ಭದ್ರತೆ ನೀಡಲಿ : ಆಲೂರು ಮಲ್ಲು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಸರ್ಕಾರ ಪೌರಕಾರ್ಮಿಕರಿಗೆ ಸೂಕ್ತ ಭದ್ರತೆ ನೀಡಲಿ : ಆಲೂರು ಮಲ್ಲು

ಚಾಮರಾಜನಗರ : ಸಾರ್ವಜನಿಕ ಸ್ಥಳಗಳನ್ನು ನಿಷ್ಕಲ್ಮಷ ಮನಸ್ಸಿನಿಂದ ಸ್ವಚ್ಛಗೊಳಿಸುವ ಪೌರಕಾರ್ಮಿಕರಿಗೆ ಸರ್ಕಾರ ಸೂಕ್ತ ಭದ್ರತೆ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಜಿಲ್ಲಾ ರೈತ ಹಿತರಕ್ಷಣ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಲೂರು ಮಲ್ಲು ಆಗ್ರಹಿಸಿದರು.

ನಗರದ ಖಾಸಗಿ ಹೋಟೆಲ್ ವೊಂದರ ಸಭಾಂಗಣದಲ್ಲಿ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಗಾನ ಗಂಧರ್ವ ಕಲಾವದಿಕೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ಹಗಲು ರಾತ್ರಿ ಎನ್ನದೆ ನಗರವನ್ನು ತಮ್ಮ ಕೈಗಳಿಂದ ಸ್ವಚ್ಛಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಅವರಿಗೆ ನಗರಸಭೆ, ಜಿಲ್ಲಾಡಳಿತ ಹಾಗೂ ಸರ್ಕಾರದ ವತಿಯಿಂದ ಅವರ ಕೆಲಸಕ್ಕೆ ಅಗತ್ಯವಾದ ವಸ್ತುಗಳನ್ನು ನೀಡುವ ಜತೆಗೆ ಅವರಿಗೆ ಸೂಕ್ತ ಭದ್ರತೆ ನೀಡಬೇಕು. ಅಲ್ಲದೆ ಪೌರಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಅವರಿಗೆ ಉತ್ತಮ ಆಹಾರ ಪದಾರ್ಥಗಳನ್ನು ನೀಡಬೇಕು. ಸರ್ಕಾರ ಕೂಡಲೇ ಈ ಕಾರ್ಯವನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪೌರಕಾರ್ಮಿಕರ ದುಡಿಮೆಯನ್ನು ಪರಿಗಣಿಸಿ ಅವರಿಗೆ ಅನುಕೂಲವಾಗುವಂತೆ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಕಲಾ ವೇದಿಕೆ ವತಿಯಿಂದ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಣೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದರು.

Edited By : PublicNext Desk
Kshetra Samachara

Kshetra Samachara

04/02/2025 04:00 pm

Cinque Terre

960

Cinque Terre

0

ಸಂಬಂಧಿತ ಸುದ್ದಿ