ಚಿಕ್ಕಬಳ್ಳಾಪುರ; ಕೆಟ್ಟು ನಿಂತಿದ್ದ ಸಿಮೆಂಟ್ ಲಾರಿಗೆ ಕ್ಯಾಂಟರ್ ಲಾರಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಈ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಚದುಲಪುರ ಗೇಟ್ ನ ಪ್ರವಾಸಿ ಮಂದಿರದ ಬಳಿ ನಡೆದಿದೆ.
ಘಟನೆಯಲ್ಲಿ ಕ್ಯಾಂಟರ್ ವಾಹನ ಜಖಂ ವಾಗಿದ್ದು, ವಾಹನದಲ್ಲಿದ್ದ ಎಳನೀರು ಕಾಯಿಗಳು ಚೆಲ್ಲಾಪಿಲ್ಲಿಯಾಗಿದೆ.ಕ್ಯಾಂಟರ್ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯವಾಗಿದೆ .ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಪ್ರಕರಣ ನಂದಿಗಿರಿಧಾಮ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
29/09/2022 02:00 pm