ಚಿಕ್ಕಬಳ್ಳಾಪುರ : ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ವಿದೇಶದಿಂದ ಅಕ್ರಮವಾಗಿ ತಂದಿದ್ದ ಕೋಟಿ ಕೋಟಿ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ಮೌಲ್ಯದ 23 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದು ಹೈಡ್ರೋಪೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾ ಇದ್ದವು ಅನ್ನೋ ಮಾಹಿತಿ ಇದೆ.
ಲಗೇಜ್ ಬ್ಯಾಗ್‌ನಲ್ಲಿಟ್ಟುಕೊಂಡು ಬಂದಿದ್ದ ಮೂವರು ಆರೋಪಿಗಳು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪರಿಶೀಲನೆ ವೇಳೆ ಸಿಕ್ಕಿ ಬಿದ್ದಿದ್ದು, ಗಾಂಜಾ ಸಮೇತ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ.
PublicNext
17/01/2025 11:12 am