ಚಿಕ್ಕಬಳ್ಳಾಪುರ: ಭ್ರಷ್ಟ ಅಧಿಕಾರಿಗಳ, ಭ್ರಷ್ಟ ರಾಜಕಾರಣಿಗಳ ಪಾಲಿಗೆ ಲೋಕಾಯುಕ್ತ ಸಂಸ್ಥೆ ಸಿಂಹಸ್ವಪ್ನವೇ ಸರಿ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೈಫೈ ಆಫೀಸರ್‌ನಂತೆ ನೀಟಾಗಿ ಇನ್ಶರರ್ಟ್ ಮಾಡ್ಕೊಂಡು, ತಲೆಗೆ ಹ್ಯಾಟು, ಕೈಯಲ್ಲಿ ಫೈಲು ಹಿಡಿದುಕೊಂಡು ತಾಲೂಕು ಕಚೇರಿಗೆ ಬಂದಿರುವ ಇಬ್ಬರು ನಕಲಿ ಲೋಕಾಯುಕ್ತ ಅಧಿಕಾರಿಗಳು, ತಹಶೀಲ್ದಾರ್ ಮುಂದೆಯೇ ಕಾಲು ಮೇಲೆ ಕಾಲು ಹಾಕಿ ಕೂತಿದ್ದಾರೆ. ಇವರಲ್ಲಿ ಒಬ್ಬಾತ ತನ್ನನ್ನು ಪ್ರಣವ್ ಎಂದು ಪರಿಚಯಿಸಿಕೊಂಡು, ತಾನು ಲೋಕಾಯುಕ್ತ ಅಧಿಕಾರಿಯಾಗಿದ್ದು, ಬೆಂಗಳೂರಿನಿಂದ ಬಂದಿದ್ದೇನೆ ಎಂದು ಹೇಳಿದ್ದಾನೆ.ಅವರು ಮೊದಲು ತಾಲೂಕು ಕಚೇರಿ ಪಕ್ಕದ ಸಬ್ರಿಧಜಿಸ್ಟ್ರಾರ್ ಕಚೇರಿ ಕಡೆ ತೆರಳಿದ್ದಾರೆ. ಅಲ್ಲಿ ಅರ್ಧ, ಮುಕ್ಕಾಲು ಗಂಟೆ ತಾಲೂಕು ಕಚೇರಿ ಸುತ್ತಲೂ ಅಲೆದಾಡಿ ತಾಲೂಕು ಕಚೇರಿಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ನೇರವಾಗಿ ಶಿರೆಸ್ತೇದಾರ ಬಳಿ ತೆರಳಿ ಸೊಪ್ಪಹಳ್ಳಿ ಗ್ರಾಮದ ಸರ್ವೆ ನಂಬರ್ 103ಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪಡೆದುಕೊಂಡಿದ್ದಾರೆ.
ಇದಾದ ಬಳಿಕ ತಾಲೂಕು ಕಚೇರಿಯ ಎಲ್ಲಾ ಶಾಖೆಗಳಿಗೂ ಭೇಟಿ ನೀಡಿ ತನಗೆ ಬೇಕಾದ ದಾಖಲೆಗಳನ್ನು ಪಡೆದುಕೊಂಡಿದ್ದಾನೆ. ಹೀಗೆ ಎಲ್ಲಾ ದಾಖಲೆಗಳನ್ನು ಪಡೆದು ಹೋಗುತ್ತಿದ್ದ ಅಸಾಮಿಯನ್ನು ಕಂಡ ತಹಶೀಲ್ದಾರ್ ಗಣಪತಿ ಶಾಸ್ತ್ರಿ ತಡೆದು ನಿಲ್ಲಿಸಿದ್ದಾರೆ. ಅವರ ಬಳಿ, ನೀವು ಯಾರು, ಎಲ್ಲಿ ನಿಮ್ಮ ಐಡಿ ಕಾರ್ಡು ತೋರಿಸಿ ಎಂದಿದ್ದಾರೆ.ಆಗ ಆತ ಐಡಿ ಕಾರ್ಡ್ ತಂದಿಲ್ಲ ಅಂದಿದ್ದಾನೆ. ಸರಿ ನಿಮ್ಮ ಹೆಡ್ ಆಫೀಸ್ನಯ ಎಸ್ಪಿಯವರಿಗೆ ಕರೆ ಮಾಡಿಕೊಡಿ, ನಾನು ಮಾತಾಡುತ್ತೇನೆ ಎಂದು ಹೇಳಿದ್ದಾರೆ. ಅದಕ್ಕೆ ಪ್ರಣವ್ ಕರೆ ಮಾಡುವವನ ತರ ಮಾಡಿ ನಾಟಕ ಮಾಡಿದ್ದಾನೆ. ಈ ವೇಳೆ ಆಚೆ ಐಡಿ ಕಾರ್ಡ್ ಇದೆ ತರುತ್ತೇನೆ ಎಂದು ಹೇಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.
ಸದ್ಯ ನಕಲಿ ಲೋಕಾಯುಕ್ತ ಅಧಿಕಾರಿಗಳ ವಿರುದ್ದ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ ದೂರು ದಾಖಲಿಸಿದ್ದಾರೆ.
PublicNext
24/09/2022 05:37 pm