ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಜ್ವಲಂತ ಸಮಸ್ಯೆ ಲೆಕ್ಕಿಸದೇ ಮೊಬೈಲ್‌ನಲ್ಲಿ ಮಗ್ನರಾದ ಅಧಿಕಾರಿಗಳು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ದಿಶಾ ಸಮಿತಿ ಸಭೆಯಲ್ಲಿ ಅಧಿಕಾರಿಗಳು ಭಾಗಿಯಾಗಿದ್ದು ,ಮೊಬೈಲ್ ನಲ್ಲಿ ಸಮಯ ಕಳೆಯುತ್ತಾ ಚೆಲ್ಲಾಟವಾಡಿದ್ದಾರೆ. ಇನ್ನೂ ನಡೆಯುತ್ತಿದ್ದ ಸಭೆಯಲ್ಲಿ ಮೊಬೈಲ್ ನಲ್ಲಿಯೇ ಅಧಿಕಾರಿಗಳು ಮಗ್ನರಾಗಿದ್ದಾರೆ.

ಸಭೆಯಲ್ಲಿ ಗಂಭೀರ ಚರ್ಚೆಗಳು ನಡೆಯುವಾಗಲೇ ಅಧಿಕಾರಿಗಳು ಬೇಜವಾಬ್ದಾರಿಯುತವಾಗಿ ಮೊಬೈಲ್ ನಲ್ಲೇ ಮುಳುಗಿದ್ದಾರೆ. ಚಿಕ್ಕಬಳ್ಳಾಪುರ ಸಂಸದ ಬಿ ಎನ್ ಬಚ್ಚೇಗೌಡ ಅಧ್ಯಕ್ಷತೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಈ ಸಭೆ ನಡೆಯುತ್ತಿದ್ದು,ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವಾಗಲೇ ಅಧಿಕಾರಿಗಳು ಕೇರ್ ಲೆಸ್ ನಡೆಸಿದ್ದಾರೆ.

Edited By : Somashekar
PublicNext

PublicNext

29/09/2022 03:29 pm

Cinque Terre

25.86 K

Cinque Terre

1