ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಬಿ.ಎನ್ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಪಿಎಫ್‌ಐ ಜೊತೆಗೆ ಆರ್‌ಎಸ್‌ಎಸ್ ಬ್ಯಾನ್ ಮಾಡಿ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಸಂಸದ ಬಿ ಎನ್ ಬಚ್ಚೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಆರ್‌ಎಸ್‌ಎಸ್ ಒಂದು ಸೇವಾ ಸಂಘಟನೆ ಹಾಗಾಗಿ ಅದನ್ನು ಬ್ಯಾನ್ ಮಾಡುವ ಅವಶ್ಯಕತೆ ಇಲ್ಲ. 1925ರಿಂದ ರಾಷ್ಟ್ರೀಯ ಸೇವಾ ಸಮಿತಿ ಸೇವಾ ಮನೋಭಾವದಿಂದ ಆರಂಭ ಮಾಡಿದೆ. ರಾಷ್ಟ್ರ ದ್ರೋಹಿ ಕೆಲಸ ಮಾಡುವ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನ ಬ್ಯಾನ್ ಮಾಡಿರೋದು ಸ್ವಾಗತಾರ್ಹ. ಬಿಜೆಪಿ ಸರ್ಕಾರ ಇಷ್ಟು ವರ್ಷಗಳ ನಂತರ ಒಳ್ಳೆಯ ಕೆಲಸ ಮಾಡಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಿಜೆಪಿ ಸಂಸದ ಬಿ. ಎನ್ ಬಚ್ಚೇಗೌಡ ಹೇಳಿದ್ದಾರೆ.

Edited By : Manjunath H D
PublicNext

PublicNext

29/09/2022 06:37 pm

Cinque Terre

28.68 K

Cinque Terre

3