ಹಿಂದಿ ದಿವಸ್ ಆಚರಣೆ ವಿರೋಧಿಸಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಕನ್ನಡ ಪರ ಸಂಘಟನೆಗಳು ಸೇರಿ ಮಾನವ ಸರಪಳಿ ನಿರ್ಮಿಸಿ ವಾಹನಗಳನ್ನು ಅಡಗಟ್ಟಿ ಶಿಡ್ಲಘಟ್ಟ ಸರ್ಕಲ್ ನಲ್ಲಿ ಕೆಲಕಾಲ ಪ್ರತಿಭಟನೆಯನ್ನು ನಡೆಸಿದರು.
ಬಲವಂತವಾಗಿ ಹಿಂದಿ ಹೆರಲು ಮುಂದಾದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ , ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಹಿಂದಿ ದಿವಸ ಆಚರಣೆ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಶಿಡ್ಲಘಟ್ಟ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡಸಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಪತ್ರವನ್ನು ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರು. ಮಾಜಿ ಶಾಸಕರು, ಕಾರ್ಯಕರ್ತರು ಹಾಗೂ ಕನ್ನಡ ಪರ ಸಂಘಟನೆಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.
PublicNext
14/09/2022 06:39 pm