ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮಳೆಯಲ್ಲಿ ರಸ್ತೆ ಕಾಣದೆ ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ಮಳೆಗೆ ರಸ್ತೆ ಕಾಣದೆ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನರಸಿಂಹರಾಜಪುರ ತಾಲೂಕಿನ ದೇವದಾನ ಎಸ್ಟೇಟ್ ಬಳಿ ನಡೆದಿದೆ. ಅದೃಷ್ಟವಶಾತ್ 2 ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಳೆಹೊನ್ನೂರು ಸುತ್ತಮುತ್ತಾ ಧಾರಾಕಾರ ಮಳೆಯಾಗುತ್ತಿದ್ದು ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕಾಗಿದೆ.

Edited By : PublicNext Desk
Kshetra Samachara

Kshetra Samachara

22/10/2024 06:31 pm

Cinque Terre

20

Cinque Terre

0

ಸಂಬಂಧಿತ ಸುದ್ದಿ