ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಐಪಿಸಿ ಕಲಂ 454, 457, 380 ಅಡಿಯಲ್ಲಿ ನವೀನ್ ಕುಮಾರ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿತ್ತು. ದೀರ್ಘ ಕಾಲದಿಂದ ಬಾಕಿ ಇದ್ದ ಪ್ರಕರಣದಲ್ಲಿ ಆರೋಪಿ ನವೀನ್ ಕುಮಾರ್, 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದನು, ಇಂದು ಗೋಣಿಬೀಡು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮಕ್ಕಾಗಿ ಮೂಡಿಗೆರೆ ಎಸ್.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Kshetra Samachara
04/02/2025 05:06 pm