ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ 07 ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 50 ಅಂಗನವಾಡಿ ಕಾರ್ಯಕರ್ತೆ ಮತ್ತು 254 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಗೌರವ ದಿನದ ಆಧಾರದ ಮೇಲೆ ನೇಮಕ ಮಾಡಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 19 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

15/10/2024 10:16 pm

Cinque Terre

4.24 K

Cinque Terre

0

ಸಂಬಂಧಿತ ಸುದ್ದಿ