ಚಿಕ್ಕಮಗಳೂರು : ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 23 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಆಯ್ಕೆಯಾದ ಒಟ್ಟು 66 ಅಭ್ಯರ್ಥಿಗಳ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳ ಪರಿಶೀಲನೆ ಜನವರಿ 06ರಂದು ನಡೆಸಲಾಗಿರುತ್ತದೆ.
ಅದರಂತೆ ಆಯ್ಕೆಯಾದ ಅಭ್ಯರ್ಥಿಗಳ ವರ್ಗವಾರು 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಹಾಗೂ ತಾತ್ಕಾಲಿಕ ಅಂಕಗಳನ್ನು ಚಿಕ್ಕಮಗಳೂರು ಜಿಲ್ಲಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಗಳ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜನವರಿ 23 ರೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
17/01/2025 01:38 pm