ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾದ ಮುಳ್ಳಯ್ಯನಗಿರಿ, ದತ್ತಾಪೀಠ, ಹೊನ್ನಮ್ಮನ ಹಳ್ಳಗಳಿಗೆ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು ಹೆಚ್ಚಿನ ವಾಹನಗಳನ್ನು ಗಿರಿ ಪ್ರದೇಶದಲ್ಲಿ ನಿರ್ಬಂಧಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ರೂಪು ರೇಷೆ ಸಿದ್ದಪಡಿಸಿದ್ದು ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಪರಿಶೀಲನೆ ನಡೆಸಿದರು. ನಂತರ ಪ್ರತಿಕ್ರಿಯೆ ನೀಡಿದ ಅವರು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ದವರು ನೀಡಿದ ವರದಿಯಂತೆ ಹೆಚ್ಚಿನ ವಾಹನಗಳನ್ನು ಗಿರಿ ಪ್ರದೇಶದಲ್ಲಿ ತೆರಳದಂತೆ ಸೂಚಿಸಿದ್ದು ಇದಕ್ಕೆ ಸೂಕ್ತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿಗರಿಗೆ ಅನುಕೂಲವಾಗುವಂತೆ ವಾಹನಗಳ ವ್ಯವಸ್ಥೆ ಮಾಡಲಾಗುವುದು ಇದರಿಂದ ಗಿರಿ ಪ್ರದೇಶದಲ್ಲಿ ಒತ್ತಡ ಕಡಿಮೆಯಾಗುತ್ತದೆ ಎಂದರು
Kshetra Samachara
02/11/2024 08:57 pm