ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಸಿ.ಟಿ ರವಿ ನೇತೃತ್ವದಲ್ಲಿ ನಾಳೆ ಅಹೋರಾತ್ರಿ ಧರಣಿ - ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ

ಚಿಕ್ಕಮಗಳೂರು : ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಜಿಲ್ಲಾ ಬಿಜೆಪಿ ರೈತರು ಮತ್ತು ಸಾರ್ವಜನಿಕರ ಪರವಾಗಿ ಹಾಗೂ ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಗುರುವಾರ (ನಾಳೆ) ಬೆಳಗ್ಗೆ 10 ಗಂಟೆಯಿಂದ ಶುಕ್ರವಾರ ಬೆಳಗ್ಗೆ 10 ಗಂಟೆಯವರೆಗೆ ಆಜಾದ್ ಪಾರ್ಕ್ ವೃತ್ತದಲ್ಲಿ ಸಿ.ಟಿ ರವಿ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ತಿಳಿಸಿದ್ದಾರೆ.

ವಕ್ಫ್ ಆಸ್ತಿ ಸಂಬಂಧ ನಮ್ಮ ಜಿಲ್ಲೆಯಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ನಿರ್ದೇಶದಂತೆ ಜಿಲ್ಲಾ ಬಿಜೆಪಿಯಿಂದ ಈ ಪ್ರತಿಭಟನೆ ಹಮ್ಮಿಕೊಂಡಿದ್ದು. ರೈತ ಮುಖಂಡರು ವಕೀಲರು ಸಾರ್ವಜನಿಕರು ಭಾಗವಹಿಸುವ ಮೂಲಕ ತಮ್ಮ ಆಸ್ತಿಯನ್ನು ರಕ್ಷಣೆ ಮಾಡಿಕೊಳ್ಳುಬೇಕೆಂದರು. ಅಲ್ಲದೇ ಪ್ರತಿಯೊಬ್ಬ ರೈತರು ಹಾಗೂ ಸಾರ್ವಜನಿಕರು ಆಗಾಗ ತಮ್ಮ ಜಾಗದ ಪಹಣಿಯನ್ನು ಪರೀಕ್ಷಿಸಿ ಕೊಳ್ಳುವುದು ಉತ್ತಮ ಎಂದರು.

Edited By : PublicNext Desk
PublicNext

PublicNext

20/11/2024 04:40 pm

Cinque Terre

24.58 K

Cinque Terre

0

ಸಂಬಂಧಿತ ಸುದ್ದಿ