ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಟೆಂಪಲ್ ರನ್ ಸ್ವಾರ್ಥಕ್ಕಾಗಿ ಮಾಡ್ತಿರೋದು ಡಿಕೆಶಿ ವಿರುದ್ಧ - ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಹಾಗೂ ಡಿನ್ನರ್ ಪಾಲಿಟಿಕ್ಸ್ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ರಾಜ್ಯದಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ನಡೆಯುತ್ತಿದ್ದು ಕರ್ನಾಟಕ ಸಾವಿನ ಮನೆಯಂತಾಗಿದೆ. 2500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ನಾಡಿಕೊಂಡಿದ್ದಾರೆ.

ಪ್ರಾಮಾಣಿಕ ಅಧಿಕಾರಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ತಜ್ಞ ರ ಸಮಿತಿ ರಚನೆಯಾಗಿದ್ದರೂ ಬಾಣಂತಿಯರು ಹಸುಗೂಸುಗಳ ಸಾವಿಗೆ ಕಾರಣವೇನೆಂದು ತಿಳಿದಿಲ್ಲ ಸರ್ಕಾರ ಯಾವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಶ್ನಿಸಿದರು. ಇಂತಹ ಸಂದರ್ಭದಲ್ಲಿ ಡಿನ್ನರ್ ಮೀಟಿಂಗ್ ಅಲ್ಲ, ಸಾವಿಗೆ ಕಾರಣವಾದ ಸಂಬಂಧ ಉನ್ನತ ಮೀಟಿಂಗ್ ಮಾಡಬೇಕಿತ್ತು. ಸಾವಿಗೆ ಕಾರಣ ಆಸ್ಪತ್ರೆಯೋ, ವೈದ್ಯರೋ, ಔಷಧಿಯೋ ಏನು ಎಂದು ತಿಳಿಯಬೇಕಿತ್ತು. ಆದರೆ, ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲದಂತಾಗಿದೆ. ಕಲ್ಲು ಹೃದಯ, ಹೃದಯ ಹೀನರಂತೆ ವರ್ತಿಸುತ್ತಿದ್ದಾರೆ. ಡಿನ್ನರ್ ಮೀಟಿಂಗ್, ಟೆಂಪಲ್ ರನ್ ಸ್ವಾರ್ಥಕ್ಕಾಗಿ ಮಾಡ್ತಿರೋದು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

Edited By : PublicNext Desk
PublicNext

PublicNext

11/01/2025 12:00 pm

Cinque Terre

20.35 K

Cinque Terre

1

ಸಂಬಂಧಿತ ಸುದ್ದಿ