ಚಿಕ್ಕಮಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಚರ್ಚೆಗಳ ಕುರಿತು ಪ್ರತಿಕ್ರಿಯೆ ನೀಡಿರುವ ಶೃಂಗೇರಿ ಶಾಸಕ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಟಿ.ಡಿ. ರಾಜೇಗೌಡ ಅಧಿಕಾರ ಹಂಚಿಕೆ ಬಗ್ಗೆ ನನಗೆ ಗೊತ್ತಿಲ್ಲ. ಅದು ಹೈಕಮಾಂಡ್ಗೆ ಬಿಟ್ಟ ವಿಚಾರ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದರ ಪ್ರಕಾರ ನಮ್ಮ ಸರ್ಕಾರ ನಡೆಯುತ್ತೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಶಾಸಕಾಂಗ ಸಭೆಗಳು ಆಗಿಂದಾಗೆ ನಡಿತಾವೆ. ಅದರ ಬಗ್ಗೆ ಏನೂ ವಿಶೇಷ ಇಲ್ಲ. ಬಜೆಟ್ ಬಗ್ಗೆ ಶಾಸಕಾಂಗ ಸಭೆ ಕರೀತಾರೆ, ಅದನ್ನ ರಾಜಕೀಯವಾಗಿ ಬಿಂಬಿಸುವುದು ಸರಿಯಲ್ಲ. ರಾಜ್ಯದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಜನಪರವಾದ ಆಡಳಿತ ನೀಡುತ್ತಿದ್ದೇವೆ. ಯಾರಿಗೆ ತಾನೇ ಸಚಿವ ಸ್ಥಾನದ ಆಸೆ ಆಕಾಂಕ್ಷೆ ಇರಲ್ಲ ಹೇಳಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಸಚಿವನಾಗಬೇಕು ಎನ್ನುವ ಆಸೆ ಇದೆ ಎಂದು ಪರೋಕ್ಷವಾಗಿ ಹೇಳಿದ ಶಾಸಕ ರಾಜೇಗೌಡ ಹೇಳಿದ್ದಾರೆ. ಜಿಲ್ಲೆಯಲ್ಲಿ 5 ಕ್ಕೆ 5 ಜನ ಕಾಂಗ್ರೆಸ್ ಶಾಸಕರು ಆಯ್ಕೆ ಆಗಿದ್ದಾರೆ. ನಾನು ಎರಡು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡ ಹೇಳಿಕೆ ನೀಡಿದ್ದಾರೆ.
PublicNext
11/01/2025 02:45 pm