ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಬೆಳಗಾವಿಗೆ ಬಂದು ಕ್ಷಮೆ ಕೇಳುವಂತೆ ಸಿ.ಟಿ ರವಿಗೆ ಬೆದರಿಕೆ ಪತ್ರ

ಚಿಕ್ಕಮಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹಾಗೂ ಅವರ ಪುತ್ರ ಸೂರ್ಯನಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಪತ್ರವೊಂದು ಬಂದಿದೆ. ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ.

ಪತ್ರದಲ್ಲಿ ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ ಹಾಗೂ ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಈ ಕುರಿತು ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ. ಅವಶ್ಯಕತೆ ಇದ್ದರೆ ಅವರ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುವುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Edited By : Ashok M
PublicNext

PublicNext

11/01/2025 03:01 pm

Cinque Terre

31.5 K

Cinque Terre

7

ಸಂಬಂಧಿತ ಸುದ್ದಿ