ಚಿಕ್ಕಮಗಳೂರು : ಭಾರತೀ ತೀರ್ಥ ಸ್ವಾಮೀಜಿಗಳು ಸನ್ಯಾಸತ್ವವನ್ನು ಸ್ವೀಕರಿಸಿದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ಕಾರ್ಯಕ್ರಮದ ಪ್ರವಚನದ ವೇಳೆ ಶಾರದಾ ಪೀಠದ ಕಿರಿಯ ಜಗದ್ಗುರು ವಿದುಶೇಖರ ಶ್ರೀಗಳು 'ಶಿವಕುಮಾರ್ ಮುಖ್ಯಮಂತ್ರಿ ಎಂಬ ಪದ ಬಳಕೆ ಮಾಡಿದ್ದಾರೆ.
ಡಿ.ಕೆ ಶಿವಕುಮಾರ್ ರಾಜಕಾರಣಿಯಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಬಂದಿಲ್ಲ ಭಕ್ತನಾಗಿ ಬಂದಿದ್ದಾರೆ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ, ಎಲ್ಲಿ ಭಕ್ತಿ ಇದೆಯೋ.. ಅಲ್ಲಿ ಭಗವಂತ ಇದ್ದಾನೆ. ನಮ್ಮ ಕೆಲಸ ಎಲ್ಲರ ಆಶಯ, ಅಭಿಪ್ರಾಯ, ಇಲ್ಲಿಗೆ ಬಂದಿರೋದು ನಮ್ಮ ಸರ್ಕಾರ, ಜನರಿಗೆ ಒಳ್ಳೆಯದಾಗಲಿ ಎಂದು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಳಗ್ಗೆ ಡಿಸಿಎಂ ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಆಗುತ್ತಿದಂತೆಯೇ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂಬ ಘೋಷಣೆಗಳು ಮೊಳಗಿದವು.
PublicNext
11/01/2025 05:42 pm