ಚಿಕ್ಕಮಗಳೂರು : 75ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಸುಭಾಷ್ ಚಂದ್ರ ಆಟದ ಮೈದಾನದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಸರ್ಕಾರದ ಯಾವುದೇ ಅನುದಾನ ನೀಡಿಲ್ಲವೆಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದ್ದಾರೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಥಳೀಯವಾಗಿ ಆದಾಯ ಕ್ರೂಡೀಕರಣ ಮಾಡಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ.
ಇದಕ್ಕೆ ಸರ್ಕಾರದ ಹಣವನ್ನು ದುಂದು ವೆಚ್ಚ ಮಾಡುವುದಿಲ್ಲ, ಸಾರ್ವಜನಿಕರು ಭಾಗವಹಿಸಲಿ ಎಂದು ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದರು. ಪ್ರತಿ ವರ್ಷವೂ ನಗರದ ಬೋಳ ರಾಮೇಶ್ವರ ದೇವಸ್ಥಾನ ಸಮೀಪದ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಸುಮಾರು 12 ಲಕ್ಷ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ನಡೆಸಲಾಗುತ್ತಿತ್ತು. ಈ ಬಾರಿ ಜಿಲ್ಲಾ ಆಟದ ಮೈದಾನಕ್ಕೆ ವರ್ಗಾವಣೆಯಾಗಿರುವುದರಿಂದ ಖರ್ಚು ದುಪ್ಪಟ್ಟಾಗಿದ್ದು ಈ ಬಾರಿ 24 ಲಕ್ಷದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ.
Kshetra Samachara
24/01/2025 09:14 pm