ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುರುಘಾ ಶ್ರೀ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಇಂದು ಕೂಡ ಜಾಮೀನು ಮಂಜೂರಾಗಿಲ್ಲ. ಬದಲಿಗೆ ಇನ್ನು ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮುರುಘಾ ಶರಣರ ನ್ಯಾಯಾಂಗ ಬಂಧನ ಇಂದು ಅಂತ್ಯವಾದ ಹಿನ್ನೆಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಮುರುಘಾ ಶ್ರೀಗೆ ಇಂದಾದರೂ ಜಾಮೀನು ಸಿಗಬಹುದು ಅಂತ ನಿರೀಕ್ಷೆ ಭಕ್ತರಲ್ಲಿತ್ತು. ಆದರೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಚಿತ್ರದುರ್ಗ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶವನ್ನು ನೀಡಿದೆ.ಅಕ್ಟೋಬರ್ 21 ರವರೆಗೆ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ಇನ್ನೂ ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್ ನ ಮಹಿಳಾ ವಾರ್ಡನ್ ಅವರ ನ್ಯಾಯಾಂಗ ಬಂಧನ ಮುಗಿದಿತ್ತು. ಅವರನ್ನು ಸಹ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಲೇಡಿ ವಾರ್ಡನ್ ಅವರನ್ನು ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Edited By : Nirmala Aralikatti
PublicNext

PublicNext

10/10/2022 05:20 pm

Cinque Terre

19.8 K

Cinque Terre

1

ಸಂಬಂಧಿತ ಸುದ್ದಿ