ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಶರಣ ಸಂಸ್ಕೃತಿ ಕ್ರೀಡಾಕೂಟ- ಸಾಂಸ್ಕೃತಿಕ ಉತ್ಸವ ವೈಭವ

ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಮುರುಘರಾಜೇಂದ್ರ ಮಠದಲ್ಲಿ 2024ರ ಶರಣ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ನಿಮಿತ್ತ ನಗರದ ಮಾಧ್ಯಮಿಕ ಶಾಲಾ ಆವರಣದಲ್ಲಿ ಇಂದು ಮೊದಲ ದಿನದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಹ್ಯಾಂಡ್ ಬಾಲ್, ವಾಲಿಬಾಲ್ ಪಂದ್ಯಾವಳಿಗಳಿಗೆ ಚಾಲನೆ ನೀಡುವುದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದ್ದು, ವಿಶೇಷವಾಗಿ ಬಸವಣ್ಣನವರ ಪದಗಳಿಗೆ ಹಾಗೂ ಜಾನಪದ ಹಾಡುಗಳಿಗೆ ನೃತ್ಯ ರೂಪಕ ಮೂಲಕ ಪ್ರದರ್ಶನ ಮಾಡಲಾಯಿತು. ಒಟ್ಟಾರೆ ಶರಣ ಸಂಸ್ಕೃತಿ ಉತ್ಸವದಲ್ಲಿ ಕ್ರೀಡಾಕೂಟದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಮೆರಗು ದೊರೆತಂತಾಗಿದೆ.

Edited By : Vinayak Patil
PublicNext

PublicNext

05/10/2024 10:07 pm

Cinque Terre

31.29 K

Cinque Terre

0

ಸಂಬಂಧಿತ ಸುದ್ದಿ