ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗೌರಿ ಹುಣ್ಣಿಮೆಯ ಅಂಗವಾಗಿ ಗೌರಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದ್ದಾರೆ.
ಗ್ರಾಮದಲ್ಲಿ ಗೌರಿ ಹುಣ್ಣಿಮೆಯಂದು ಕೆರೆ ಮಣ್ಣನ್ನು ತಂದು ಆನೆಯ ಮೂರ್ತಿಯನ್ನು ಮಣ್ಣಿನಲ್ಲಿ ತಯಾರಿಸಿ, ಅದರ ಮೇಲೆ ಗೌರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿವಿಧ ಹೂಗಳಿಂದ ಅಲಂಕಾರ ಮಾಡಿ, ಐದು ದಿನಗಳ ಕಾಲ ಗ್ರಾಮದ ಹೆಣ್ಣು ಮಕ್ಕಳು ವಿಶೇಷ ಉಡುಗೆಗಳನ್ನು ತೊಟ್ಟು ಅಲಂಕಾರಗೊಂಡು ಗೌರಮ್ಮನಿಗೆ ಆರತಿ ಹಿಡಿದು ಪೂಜೆ ಸಲ್ಲಿಸಿದ್ದಾರೆ.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೂವಿನ ಪಲ್ಲಕ್ಕಿಯಲ್ಲಿ ದೇವಿಯನ್ನು ಇಟ್ಟು ಮೆರವಣಿಗೆ ಮಾಡಿ ವಿವಿಧ ವಾದ್ಯಗಳ ಮೂಲಕ ಮಹಿಳೆಯರ ಕುಣಿತ ಹಬ್ಬವನ್ನು ಸಂಭ್ರಮಿಸಿದ್ದಾರೆ.
PublicNext
21/11/2024 10:11 am