ಚಳ್ಳಕೆರೆ : ತಾಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ ಅವ್ಯವಹಾರ ನಡೆಯುತ್ತಿದ್ದು ಅಕ್ರಮ ತಡೆಗಟ್ಟುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ. ತಾಲೂಕಿನಲ್ಲಿ 40 ಗ್ರಾಮ ಪಂಚಾಯತಿಗಳಿದ್ದು ಗ್ರಾಮ ಪಂಚಾಯತಿಯಲ್ಲಿ ಅಕ್ರಮ ನಡೆಯುತ್ತಿದ್ದು ಅಕ್ರಮವನ್ನು ಕೂಡಲೇ ತಡೆಗಟ್ಟಬೇಕು ಇಲ್ಲವಾದರೆ ಸಾರ್ವಜನಿಕರ ಹಣ ಪೋಲಾಗುತ್ತದೆ, ಎಂದು ಎಚ್ಚರಿಕೆ ನೀಡಿದರು
..
PublicNext
24/01/2025 03:54 pm