ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಲವು ಕಡೆಗಳಲ್ಲಿ ತಡರಾತ್ರಿ ಮಳೆ ಅಬ್ಬರಿಸಿದ್ದು, ಹಲವು ಅವಾಂತರ ಸೃಷ್ಟಿಸಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ಬಾರಿ ಮಳೆ ಸುರಿದಿದ್ದು, ಅಪಾರ ಹಾನಿ ಸಂಭವಿಸಿದೆ. ಭಾರಿ ಮಳೆಯಿಂದ ಜಿನಿಗಿ ಹಳ್ಳ ಭರ್ತಿಯಾಗಿ ಹರಿಯುತ್ತಿದ್ದು, ತಿಪ್ಪಯ್ಯನಕೋಟೆ ಕೆರೆಗೆ ಬಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇನ್ನೋಂದು ಕಡೆ ರೈತರ ಜಮೀನುಗಳಿಗೆ ಮಳೆಯ ನೀರು ನುಗ್ಗಿದ್ದು, ಟೊಮ್ಯಾಟೊ, ಕಲ್ಲಂಗಡಿ ಬೆಳೆ ಹಾನಿಯಾಗಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅಲ್ಲದೇ ಅದೇ ಗ್ರಾಮದ ಬಳಿ ಯಶೋಧಮ್ಮ ಎಂಬುವವರ ಮನೆಯ ಮುಂಭಾಗದ ಬಾವಿಯೊಂದು ಕುಸಿದು ಹೋಗಿದ್ದು, ದೊಡ್ಡ ಅನಾಹುತ ತಪ್ಪಿದೆ.
ಇನ್ನೂ ಮತ್ತೊಂದೆಡೆ ಮೊಳಕಾಲ್ಮೂರು ತಾಲ್ಲೂಕಿನ ಜೆಬಿಹಳ್ಳಿ ಗ್ರಾಮದಲ್ಲಿ ಹಾಗೂ ಚಳ್ಳಕೆರೆ ಬಳಿಯ ದೊಡ್ಡೇರಿ ಬಳಿಯೂ ಕೂಡ ಭರ್ಜರಿ ಮಳೆಯಾಗಿದ್ದು, ಹಳ್ಳ ತುಂಬಿ ಹರಿಯುತ್ತಿದೆ. ಒಟ್ಟಾರೇ ತಡರಾತ್ರಿ ಸುರಿದ ಬಾರಿ ಮಳೆ ರೈತರಲ್ಲಿ ಸಂತಸ ಮೂಡಿಸಿದೆ.
PublicNext
05/10/2024 11:56 am