ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಕೋಟೆನಾಡಿನಲ್ಲಿ ಮಳೆರಾಯನ ಅಬ್ಬರ- ನಾಯಕನಹಟ್ಟಿಯಲ್ಲಿ ಅತ್ಯಧಿಕ ವರ್ಷಧಾರೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 29ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 46.6 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 13, ಹಿರಿಯೂರು ತಾಲ್ಲೂಕು 27.1 ಮಿ.ಮೀ., ಹೊಳಲ್ಕೆರೆ ತಾಲ್ಲೂಕು 9.8 ಮಿ.ಮೀ., ಹೊಸದುರ್ಗ ತಾಲ್ಲೂಕಿನಲ್ಲಿ 30.3 ಮಿ.ಮೀ. ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 40.8 ಮಿ.ಮೀ. ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 39.1 ಮಿ.ಮೀ, ನಾಯಕನಹಟ್ಟಿಯಲ್ಲಿ 91.5 ಮಿ.ಮೀ, ಪರಶುರಾಂಪುರ 25.8 ಮಿ.ಮೀ, ತಳಕು 40.2 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 10.4 ಮಿ.ಮೀ, ಭರಮಸಾಗರ 6.7 ಮಿ.ಮೀ, ಹಿರೇಗುಂಟನೂರು 10 ಮಿ.ಮೀ, ತುರುವನೂರು 26.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 32.2 ಮಿ.ಮೀ, ಐಮಂಗಲ 20.8 ಮಿ.ಮೀ, ಧರ್ಮಪುರ 39.9 ಮಿ.ಮೀ, ಜವನಗೊಂಡನಹಳ್ಳಿ 18.3 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 6.6 ಮಿ.ಮೀ, ಬಿ.ದುರ್ಗ 2.9 ಮಿ.ಮೀ, ರಾಮಗಿರಿ 4.7 ಮಿ.ಮೀ, ತಾಳ್ಯ 20.8 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.1 ಮಿ.ಮೀ, ಮಾಡದಕೆರೆ 15.9 ಮಿ.ಮೀ, ಮತ್ತೋಡು 44.4 ಮಿ.ಮೀ, ಶ್ರೀರಾಂಪುರ 38.5 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 27.7 ಮಿ.ಮೀ ಹಾಗೂ ದೇವಸಮುದ್ರದಲ್ಲಿ 55.5 ಮಿ.ಮೀ ಮಳೆಯಾಗಿದೆ.

26 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 26 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಅಕ್ಟೋಬರ್ 5ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Edited By : Vinayak Patil
PublicNext

PublicNext

05/10/2024 06:31 pm

Cinque Terre

25.33 K

Cinque Terre

0