ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ನೇರಲಗಂಟೆ ಪಿಡಿಓ ಅಮಾನತು

ಚಳ್ಳಕೆರೆ : ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ಸಂಬಂಧ ಚಳ್ಳಕೆರೆ ತಾಲ್ಲೂಕಿನ ನೇರಲಗುಂಟೆ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಹನುಮಂತ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ನೇರಲಗುಂಟೆ ಪಿಡಿಒ ಎಸ್.ಹನುಮಂತಕುಮಾರ್ ಅವರು ಗ್ರಾಮ ಪಂಚಾಯಿತಿ ಕಚೇರಿ ಕರ್ತವ್ಯಕ್ಕೆ 2024ರ ಸೆಪ್ಟೆಂಬರ್ 30 ರಿಂದ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ.

ಸಾರ್ವಜನಿಕರ ಕುಂದುಕೊರತೆಗಳಿಗೆ  ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ದೂರವಾಣಿ ಕರೆ ಮಾಡಿದರೂ ಸಹ ಸ್ವೀಕರಿಸದೇ ಇರುವುದರಿಂದ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಡಚಣೆ ಉಂಟಾಗಿದ್ದು, ಇವರನ್ನು ಬದಲಾವಣೆ ಮಾಡಿ ಅದೇ ಗ್ರಾಮ ಪಂಚಾಯಿತಿಯ ಗ್ರೇಡ್-1 ಕಾರ್ಯದರ್ಶಿ ಕೆ.ಎಸ್.ಜಯಣ್ಣ ಅವರಿಗೆ ಪ್ರಭಾರ ವ್ಯವಸ್ಥೆ ಮಾಡಿಕೊಡಲು ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಕೋರಿದ್ದು, ಅದರಂತೆ, ನೇರಲಗುಂಟೆ ಗ್ರಾ. ಪಂ ಹಾಜರಾತಿ ಪರಿಶೀಲಿಸಲಾಗಿ ಈ ನೌಕರರು 2024ರಿಂದ  ಇಲ್ಲಿಯವರೆಗೂ ಪೂರ್ವಾನುಮತಿ ಪಡೆಯದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ.

ಈ ಹಿಂದೆಯೂ ಸಹ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಅದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ. ಪಿಡಿಒ ಎಸ್.ಹನುಮಂತಕುಮಾರ್ ಅವರು ವಿರುದ್ಧ ಶಿಸ್ತುಕ್ರಮಕೈಗೊಳ್ಳಲು, ಆಡಳಿತಾತ್ಮಕ ಹಿತದೃಷ್ಠಿಯಿಂದ ಗ್ರೇಡ್-1 ಕಾಯದರ್ಶಿ ಕೆ.ಎಸ್.ಜಯಣ್ಣ ಅವರಿಗೆ ನೇರಲಗುಂಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಪ್ರಭಾರ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ವರದಿ ನೀಡಿರುತ್ತಾರೆ.  

Edited By : PublicNext Desk
Kshetra Samachara

Kshetra Samachara

22/10/2024 04:28 pm

Cinque Terre

820

Cinque Terre

0

ಸಂಬಂಧಿತ ಸುದ್ದಿ