ಚಿತ್ರದುರ್ಗ :ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು.ಇದೀಗ ಈ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಪವಿತ್ರಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು.
ಅಲ್ಲದೇ ನಟ ದರ್ಶನ್ ಸೇರಿ ಏಳು ಜನರಿಗೆ ಕರ್ನಾಟಕ ಹೈ ಕೋರ್ಟ್ ನೀಡಿರುವ ಜಾಮೀನು ರದ್ದು ಗೊಳಿಸುವಂತೆ ಪೊಲೀಸರು ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಇಂದು ಸುಪ್ರೀಂ ಕೋರ್ಟ್ ಒಂದು ಮೇಲ್ಮನವಿಯ ಅರ್ಜಿಯ ವಿಚಾರಣೆ ನಡೆಸಲಿದೆ.
PublicNext
24/01/2025 10:27 am