ಹಿರಿಯೂರು :ಸವಿತಾ ಮಹರ್ಷಿಗಳು ಕ್ಷೌರಿಕ ಸಮಾಜದ ಮೂಲಪುರುಷರು, ಸವಿತಾ ಮಹರ್ಷಿಗಳು ದೇವಾನುದೇವತೆಗಳಿಗೆ ಕ್ಷೌರ ಮಾಡುತ್ತಿದ್ದರೆಂಬ ನಂಬಿಕೆಯಿದ್ದು, ಶಿವನ ದಿವ್ಯದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿಗಳು ಪುರಾಣ ಗ್ರಂಥಗಳ ಪ್ರಕಾರ ದೇವದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ಕಾಶಿ ಕ್ಷೇತ್ರದಲ್ಲಿ ದೊರೆತ ಮಹಾಗ್ರಂಥದಲ್ಲಿ ಉಲ್ಲೇಖಿಸಲಾಗಿದೆ ಎಂಬುದಾಗಿ ವಾಣಿ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಡಿ.ಧರಣೇಂದ್ರಯ್ಯ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀಸವಿತಾ ಮಹರ್ಷಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Kshetra Samachara
04/02/2025 08:55 pm