ಚಿತ್ರದುರ್ಗ: ಅಪ್ಪರ್ ಭದ್ರಾ ಯೋಜನೆಗೆ 5300 ಕೋಟಿ ರೂಪಾಯಿ ಕೊಡುತ್ತೇವೆ ಅಂತ ನಿರ್ಮಲಾ ಸೀತಾರಾಮನ್ ಅವರೇ ಹೇಳಿದ್ರು. ಅಂದಿನಿಂದ ಇಂದಿನವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿವಿ ಸಾಗರ ಜಲಾಶಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ರಾಷ್ಟ್ರೀಯ ಯೋಜನೆ ಮಾಡುತ್ತೇವೆ ಎಂದು ಹೇಳಿ ಇಲ್ಲಿಯವರೆಗೂ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.
ಹಣ ಬಿಡುಗಡೆ ಮಾಡುವ ವಿಚಾರವಾಗಿ ಡಿಕೆ ಶಿವಕುಮಾರ್ ಹಾಗೂ ನೀರಾವರಿ ಸಚಿವರು ಸಹ ಕೇಂದ್ರ ಸರ್ಕಾರದ ಗಮನ ತಂದಿದ್ದಾರೆ. ಅಷ್ಟೇ ಅಲ್ಲದೆ, ಸ್ವತಹ ನಾನೇ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಅಂದಿನಿಂದ ಇಂದಿನವರೆಗೂ ಹಣ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದರು.
PublicNext
23/01/2025 06:53 pm