ಹೊಸದುರ್ಗ : ಚಿತ್ರದುರ್ಗ ನಗರಕ್ಕೆ ಹತ್ತಿರ ಇರುವ ಮಲ್ಲಾಪುರ ಕೆರೆಯನ್ನು ಅಭಿವೃದ್ಧಿ ಪಡಿಸಿ ಉತ್ತಮ ಪ್ರವಾಸಿ ತಾಣವಾಗಿಸಬಹುದು. ಆದರೆ ನಿರ್ಲಕ್ಷ್ಯ ದಿಂದ ಕೆರೆ ಸಂಪೂರ್ಣ ಹಾಳಾಗಿದೆ. ಕೆರೆ ನಿರ್ವಹಣೆ ಹೊಣೆ ಹೊತ್ತ ಅಧಿಕಾರಿಗಳ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸುತ್ತೇನೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿರುವ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆಎನ್ ಫಣೇಂದ್ರ ರವರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಚಿತ್ರದುರ್ಗ ನಗರದ ಸಮೀಪದಲ್ಲಿರುವ ಅಂತಹ ಮಲ್ಲಾಪುರ ಕೆರೆ ವೀಕ್ಷಣೆ ನಡೆಸಿ ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದರು. ಎರಡು ತಿಂಗಳ ಒಳಗಾಗಿ ಕೆರೆ ಅಭಿವೃದ್ಧಿಯಾಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ. ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಕೆರೆ ಪರಿಶೀಲನೆಗಾಗಿ ಬಂದಿದ್ದೇನೆ ಎಂದು ಅಧಿಕಾರಿಗಳು ಬೇಗ ಸಮಸ್ಯೆ ಪರಿಹರಿಸುವುದಾಗಿ ಬುರುಡೆ ಬಿಡುವುದು ಬೇಡ. ಕೆರೆ ಅಭಿವೃದ್ಧಿಗೆ ಬೇಕಾದಷ್ಟು ಸಮಯವನ್ನು ತಗೆದುಕೊಂಡು, ಸರಿಯಾಗಿ ಕೆಲಸ ನಿರ್ವಹಿಸಿ, ಒಂದು ವೇಳೆ ಕೆಲಸ ಮಾಡದಿದ್ದರೇ, ನಾನು ನಿಮ್ಮ ಮೇಲೆ ಕ್ರಮ ಕೈಗೊಳ್ಳುತ್ತೇನೆ. ಕೆರೆ ಸಾರ್ವಜನಿಕರ ಆಸ್ತಿ. ಕೂಡಲೇ ಸ್ವಚ್ಛಗೊಳಿಸಿ ಅದರ ಪೋಟೋ ಹಾಗೂ ವಿಡಿಯೋದೊಂದಿಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Kshetra Samachara
23/01/2025 05:16 pm