ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು: ಶ್ರೀತೇರುಮಲ್ಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ - ಕಂಕಣ ಕಲ್ಯಾಣೋತ್ಸವ

ಹಿರಿಯೂರು: ಕನ್ನಡ ನಾಡಿನ ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ನಗರದ ಶ್ರೀ ತೇರುಮಲ್ಲೇಶ್ವರ ಸ್ವಾಮಿ, ಶ್ರೀ ಉಮಾಮಹೇಶ್ವರ, ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವರ 2025ನೇ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ರೇವತಿ ನಕ್ಷತ್ರದ ಶುಭಲಗ್ನದಲ್ಲಿ ರಾತ್ರಿ 8 ಗಂಟೆಗೆ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಕಂಕಣ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸಿ.ರಾಜೇಶ್ ಕುಮಾರ್ , ಜಾತ್ರಾ ಸಮಿತಿ ಅಧ್ಯಕ್ಷರಾದ ಆರ್.ನಾಗೇಂದ್ರನಾಯ್ಕ, ನಗರಸಭಾ ಅಧ್ಯಕ್ಷರಾದ ಅಜಯ್ ಕುಮಾರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಅನಿಲ್ ಕಮಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/02/2025 07:34 am

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ