ಬೆಂಗಳೂರು: ಚಿರು ಮತ್ತೆ ಉದಯಿಸುತ್ತಿದ್ದಾರೆ ಎಂದು ದಿವಗಂತ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಹೇಳುವ ಮೂಲಕ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶಿವಾರ್ಜುನ ಸಿನಿಮಾ ಮರು ಬಿಡುಗಡೆಯ ಫೋಟೋ ಪೋಸ್ಟ್ ಮಾಡಿರುವ ಮೇಘನಾ, 'ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ ಸಿನಿಮಾ ಮರು ಬಿಡುಗಡೆಯಾಗುತ್ತಿದೆ' ಎಂದು ಬರೆದುಕೊಂಡಿದ್ದಾರೆ.
ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ಶಿವಾರ್ಜುನ. ಅಕ್ಟೋಬರ್ 17ರಂದು ಚಿರಂಜೀವಿ ಹುಟ್ಟುಹಬ್ಬ ಇದೆ. ಈ ಹಿನ್ನೆಲೆಯಲ್ಲಿ ಚಿರುವಿನ ಕೊನೆಯ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ ಎನ್ನಲಾಗಿದೆ.
PublicNext
09/10/2020 08:07 am