ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಸ್ಯಾಂಡಲ್‌ವುಡ್ ಮಾದಕ ನಟಿ ಸಂಜನಾ ಗಿಲ್ರಾನಿ ತಮ್ಮ ಹುಟ್ಟುಹಬ್ಬದಂದೇ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ಸಾಮಾನ್ಯವಾಗಿ ಸಂಜನಾ ತಮ್ಮ ಹುಟ್ಟುಹಬ್ಬಕ್ಕೂ ಎರಡು ದಿನದ ಮುಂಚೆಯೇ ಬರ್ತ್ ಡೇ ಸೆಲೆಬ್ರೇಷನ್‍ನಲ್ಲಿ ಬ್ಯುಸಿಯಾಗುತ್ತಿದ್ದರು. ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಬೆಂಗಳೂರು ಹಾಗೂ ಮುಂಬೈನಲ್ಲಿ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಹುಟ್ಟುಹಬ್ಬವನ್ನು ಜೈಲಿನಲ್ಲಿ ಆಚರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ಒಂದೂವರೆ ತಿಂಗಳಿಂದ ಜೈಲಿನಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿಗೆ ಶುಕ್ರವಾರ ಕೂಡ ಜಾಮೀನು ಸಿಗಲಿಲ್ಲ. ಬದಲಿಗೆ ಇಬ್ಬರು ನಟಿಯರ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗಿದೆ. ಅಕ್ಟೋಬರ್ 23ರವರೆಗೆ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಿಸಿ ಎನ್‍ಡಿಪಿಎಸ್ ವಿಶೇಷ ಕೋರ್ಟ್ ಆದೇಶ ನೀಡಿದೆ.
PublicNext
10/10/2020 01:17 pm