ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ಸೌಂದರ್ಯ ಬಯೋಪಿಕ್‍ನಲ್ಲಿ ಸಾಯಿ ಪಲ್ಲವಿ

ಬೆಂಗಳೂರು: ಖ್ಯಾತ ಬಹುಭಾಷಾ ನಟಿ ದಿವಂಗತ ಸೌಂದರ್ಯ ಅವರ ಜೀವನ ಚರಿತ್ರೆ ಕುರಿತು ಬಯೋಪಿಕ್ ಮೂಡಿ ಬರಲಿದೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.

ಈ ಬಗ್ಗೆ ಅನೇಕ ವರ್ಷಗಳಿಂದ ಮಾತು ಕೇಳಿಬರುತ್ತಿದ್ದು, ಇದುವರೆಗೆ ಅದು ಸಾಧ್ಯವಾಗಿಲ್ಲ. ಇದೀಗ ತೆಲುಗು ನಿರ್ಮಾಪಕರೊಬ್ಬರು ಬಯೋಪಿಕ್ ನಿರ್ಮಾಣ ಮಾಡುವ ಬಗ್ಗೆ ಸೌಂದರ್ಯ ಕುಟುಂಬದ ಜೊತೆ ಮಾತುಕತೆ ಕೂಡ ನಡೆಸುತ್ತಿದ್ದು, ಕುಟುಂಬದ ಒಪ್ಪಿಗೆಗೆ ಕಾಯುತ್ತಿದ್ದಾರೆ ಎನ್ನಲಾಗಿದೆ. ಆದರೆ ಸೌಂದರ್ಯ ಅವರ ಪಾತ್ರದಲ್ಲಿ ಯಾರು ನಟಿಸುತ್ತಾರೆ ಎನ್ನುವುದು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ.

ಸೌಂದರ್ಯ ಅವರ ಪಾತ್ರವನ್ನು ಮಲಯಾಳಂ ನಟಿ ಸಾಯಿಪಲ್ಲವಿ ನಿಭಾಯಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಸಾಯಿ ಪಲ್ಲವಿಗೆ ತೆಲುಗಿನಲ್ಲಿ ದೊಡ್ಡ ಅಭಿಮಾನಿ ಬಳಗವಿದೆ. ಇದೀಗ ಸೌಂದರ್ಯಾ ಬಯೋಪಿಕ್‍ಗೆ ಅವರನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ಮಾಹಿತಿ ಕೇಳಿಬಂದಿದೆ.

ಸೌಂದರ್ಯ ಅವರು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಮಿಂಚಿದ್ದರು. ಆದರೆ 2004ರಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಇಹಲೋಕ ತ್ಯಜಿಸಿದರು.

Edited By : Vijay Kumar
PublicNext

PublicNext

13/10/2020 12:13 pm

Cinque Terre

56.23 K

Cinque Terre

1