ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಅವರದ್ದು ಇಂದು 36ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ತುಂಬು ಗರ್ಭಿಣಿ ಮೇಘನಾ ರಾಜ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಶುಕ್ರವಾರ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
ತಮ್ಮ ಸಿಮಂತದ ಕೆಲ ದೃಶ್ಯಗಳ ವಿಡಿಯೋವನ್ನು ಪೋಸ್ಟ್ ಮಾಡಿರುವ ಮೇಘನಾ ಅವರು, 'ನಿನ್ನ ತಂದೆ ಸದಾ ಸಂಭ್ರಮ ನೀಡುವವರು ಕಂದಾ' ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಜೂನಿಯರ್ ಚಿರುವಿಗೆ ಸ್ವಾಗತ ಕೋರಿ ಕುಟುಂಬಸ್ಥರು ಮಾಡಿರುವ ವಿಡಿಯೋವನ್ನು ಮೇಘನಾ ಹಾಗೂ ಧ್ರುವ ಸರ್ಜಾ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು.
PublicNext
17/10/2020 09:15 am