ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ನೆರೆ ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮಳೆಯಿಂದ ಹಾನಿಗೊಳಗಾದ ಹೈದರಾಬಾದ್‌ಗಾಗಿ ಆರಂಭಿಸಿದ ಪರಿಹಾರ ನಿಧಿಗೆ 1 ಕೋಟಿ ರೂ.ವನ್ನು ಮಹೇಶ್ ಬಾಬು ದೇಣಿಗೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ತೆಲಂಗಾಣದಲ್ಲಿ ಭಾರೀ ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ಬದುಕು ಕಟ್ಟಿಕೊಳ್ಳಲು ಮುಂದಾಗಿರುವ ತೆಲಂಗಾಣ ಸರ್ಕಾರಕ್ಕೆ ನೀವು ಕೂಡ ಸಹಾಯ ಮಾಡಿ' ಎಂದು ಮನವಿ ಮಾಡಿಕೊಂಡಿದ್ದಾರೆ.
PublicNext
20/10/2020 06:54 pm