ಇಂದು ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ನಿಶ್ಚಿತಾರ್ಥ ಮಾಡಿಕೊಂಡ ದಿನ. ಇದೇ ದಿನ ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಇಂದು ಮೇಘನಾ ರಾಜ್ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.
ಈ ಮೂಲಕ ಸರ್ಜಾ ಕುಟುಂಬಕ್ಕೆ ಜೂನಿಯರ್ ಸರ್ಜಾ ಅವರ ಆಗಮನವಾಗಿದೆ.
ಬೆಳಗ್ಗೆ 11.07 ನಿಮಿಷಕ್ಕೆ ಮಗುವಿನ ಜನನವಾಗಿದ್ದು, ಚಿಕ್ಕಪ್ಪ ಧ್ರುವ ಸರ್ಜಾ ಮಗುವನ್ನು ಎತ್ತಿ ಮುದ್ದಾಡುತ್ತಿರುವ ಫೋಟೋ ರಿವೀಲ್ ಆಗಿದೆ.
ಇತ್ತ ನಾರ್ಮಲ್ ಹೆರಿಗೆಯಾಗಿದ್ದು ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
PublicNext
22/10/2020 11:53 am