ಮುಂಬೈ: ಅದೊಂದು ತೋಳಗಳ ಹಿಂಡು ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಪರೋಕ್ಷವಾಗಿ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಕಿಡಿಕಾರಿದ್ದಾರೆ.
ಜಾವೇದ್ ಅಖ್ತರ್ ಅವರು ಮುಂಬೈನ ಮೆಟ್ರೋಪಾಲಿಟನ್ ನ್ಯಾಯಾಲಯದಲ್ಲಿ ಕಂಗನಾ ವಿರುದ್ಧ ಮಾನಹಾನಿ ಪ್ರಕರಣದ ದೂರು ದಾಖಲಿಸಿದ್ದಾರೆ. ಇದಕ್ಕೆ ಕಂಗನಾ ಕಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಈ ವಿಷಯವನ್ನು ಶಿವಸೇನೆ ಮುಖಂಡ ಸಂಜಯ್ ರಾವತ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ರೀ ಟ್ವೀಟ್ ಮಾಡಿರುವ ಕಂಗನಾ, 'ಒಬ್ಬಳು ಸಿಂಹಿಣಿ ಮತ್ತು ಒಂದು ತೋಳಗಳ ಹಿಂಡು' ವ್ಯಂಗ್ಯವಾಡಿದ್ದಾರೆ.
PublicNext
04/11/2020 03:40 pm