ಬೆಂಗಳೂರು: ಕನ್ನಡ 'ಬಿಗ್ ಬಾಸ್ ಸೀಸನ್ 8'ರಲ್ಲಿ ಸಖತ್ ಸದ್ದು ಮಾಡಿದ್ದ ಸ್ಯಾಂಡಲ್‌ವುಡ್ ನಟಿ ದಿವ್ಯಾ ಸುರೇಶ್ ಅವರಿಗೆ ಅಪಘಾತವಾಗಿದೆ. ಬೆಂಗಳೂರಿನ ಉತ್ತರಹಳ್ಳಿ ರೋಡ್‌ನಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ನಾಯಿಗಳು ಅಡ್ಡಬಂದ ಪರಿಣಾಮ ನಟಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.
ನಟಿ ದಿವ್ಯಾ ಸುರೇಶ್ ಸೋಮವಾರ ಕೊರೊನಾ ವ್ಯಾಕ್ಸಿನ್ ತೆಗೆದುಕೊಂಡು ಮನೆಗೆ ತೆರಳುವಾಗ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಅಪಘಾತದಿಂದ ಸಣ್ಣಪುಟ್ಟ ಗಾಯ ಮಾಡಿಕೊಂಡಿರುವ ದಿವ್ಯಾ ಸುರೇಶ್ ಸದ್ಯ ಪ್ರಾಥಮಿಕ ಚಿಕಿತ್ಸೆ ತೆಗೆದುಕೊಂಡು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸ್ವತಃ ನಟಿ ದಿವ್ಯಾ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿದೆ ಅಂತ ಹೇಳಿದ್ದಾರೆ. ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮುಖದ ಮೇಲೆ ಸಣ್ಣಪುಟ್ಟ ಗಾಯಗಳಾಗಿವೆ. ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ನಟಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.
PublicNext
19/01/2022 04:33 pm