ಚಂಡೀಗಡ: ರೈತ ಹೋರಾಟದಲ್ಲಿ ದೆಹಲಿ ಕೆಂಪು ಕೋಟೆಯ ಮೇಲೆ ಸಿಖ್ ಧ್ವಜ ಹಾರಿಸಿದ್ದ ಪ್ರಕರಣದ ಆರೋಪಿ, ಪಂಜಾಬಿ ನಟ ದೀಪ್ ಸಿಧು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ದೆಹಲಿ ಸಮೀಪದ ಕುಂಡ್ಲಿ- ಮಾನೆಸಾರ್ (ಕೆಎಂಪಿ) ಹೆದ್ದಾರಿಯಲ್ಲಿ ದೀಪ್ ಸಿಧು ಕಾರಿನಲ್ಲಿ ಪಂಜಾಬ್‌ಗೆ ತೆರಳುತಿದ್ದ ವೇಳೆ ಅಪಘಾತ ಸಂಭವಿಸಿದೆ. ಲಾರಿ ಹಿಂಭಾಗಕ್ಕೆ ಅತೀ ವೇಗವಾಗಿ ಕಾರು ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ದೀಪ್ ಸಿಧು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ದೀಪ್ ಸಿಧು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ರೀನಾ ಅನ್ನೋ ಯುವತಿ ಕೂಡ ಇದ್ದರು. ಅಪಘಾತದಲ್ಲಿ ರೀನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋನಿಪತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವ ರೀನಾ ಭೇಟಿಯಾಗಿರುವ ಪೊಲೀಸರು ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.
PublicNext
15/02/2022 11:02 pm