ಮುಂಬೈ: ಬಾಲಿವುಡ್ ನಟ ಶಾರುಕ್ ಖಾನ್ ಅವರ ನಿವಾಸ 'ಮನ್ನತ್' ಸಮೀಪದ ಬಹುಮಹಡಿ ಕಟ್ಟಡವೊಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.
ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ಪ್ರದೇಶದಲ್ಲಿರುವ 21 ಅಂತಸ್ತಿನ 'ಜಿವೇಶ್' ವಸತಿ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 8 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿವೆ.
ಈ ಬಗ್ಗೆ ಮಾತನಾಡಿರುವ ಮುಂಬೈ ಉಪನಗರ ಅಭಿವೃದ್ಧಿ ಸಚಿವ ಆದಿತ್ಯ ಠಾಕ್ರೆ, 'ಪಶ್ಚಿಮ ಬಾಂದ್ರಾದಲ್ಲಿರುವ 21 ಅಂತಸ್ತಿನ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿಎಂಸಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಯಾವುದೇ ಸಾವಿನ ವರದಿಯಾಗಿಲ್ಲ. ಕಟ್ಟಡದ ಆವರಣದಲ್ಲಿರುವ ನಿವಾಸಿಗಳ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.
PublicNext
10/05/2022 07:23 am