ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆ ಸ್ಯಾಂಡಲ್‌ವುಡ್ ನಟಿ, ಕಿರಿಕ್ ಪಾರ್ಟಿ ಬೆಡಗಿ ಸಂಯುಕ್ತ ಹೆಗ್ಡೆ ಅವರಿಗೆ ಗಂಭೀರ ಗಾಯವಾಗಿದೆ.
ಕ್ರೀಮ್ ಚಿತ್ರದ ಫೈಟಿಂಗ್ ಸನ್ನಿವೇಶದ ಚಿತ್ರೀಕರಣ ಮಾಡುತ್ತಿದ್ದ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಪೆಟ್ಟಾಗಿರುವುದಾಗಿ ತಿಳಿದುಬಂದಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಿನಿಮಾದ ಚಿತ್ರೀಕರಣ ಮುಂದೂಡಿರುವುದಾಗಿ ಚಿತ್ರತಂಡ ತಿಳಿಸಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಫೈಟ್ ಮಾಸ್ಟರ್ ಪ್ರಭು ಸಮ್ಮುಖದಲ್ಲಿ ಈ ಫೈಟಿಂಗ್ ಸೀನ್ ಚಿತ್ರೀಕರಣ ಮಾಡಲಾಗುತ್ತಿತ್ತು. ಈ ವೇಳೆ ನಡೆದ ಅಚಾತುರ್ಯದಿಂದ ಸಂಯುಕ್ತ ಅವರ ಕಾಲು ಹಾಗೂ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಇನ್ನು, ಚಿತ್ರೀಕರಣ ಮಾಡುವಾಗ ಡ್ಯೂಪ್ ಬಳಸುವಂತೆ ಛಾಯಾಗ್ರಾಹಕ ಸುನೋಜ್ ವೇಲಾಯುಧನ್ ಅವರು ಸಲಹೆ ನೀಡಿದ್ದರು ಎನ್ನಲಾಗಿದೆ. ಈ ಚಿತ್ರಕ್ಕೆ ಅಭಿಷೇಕ್ ಬಸಂತ್ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಡಿ.ಕೆ.ದೇವೇಂದ್ರ ಅವರು ಬಂಡವಾಳ ಹೂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
27/07/2022 09:00 pm